ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿತು. ತಂಡದ ಪರ ಕ್ಲಾಸೆನ್ 71 ರನ್ ಮತ್ತು ಅಭಿನವ್ 43 ರನ್ ಗಳಿಸಿದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ನಾಲ್ಕು ವಿಕೆಟ್ ಪಡೆದರೆ, ದೀಪಕ್ ಚಹಾರ್ ಎರಡು ವಿಕೆಟ್ ಪಡೆದರು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ, ರೋಹಿತ್ ಶರ್ಮಾ ಅವರ ಅಮೋಘ ಅರ್ಧಶತಕದ ನೆರವಿನಿಂದ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ಕಳಪೆ ಆರಂಭ ಕಂಡಿತು. ತಂಡವು 20 ಕ್ಕಿಂತ ಕಡಿಮೆ ಸ್ಕೋರ್‌ಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಟ್ರಾವಿಸ್ ಹೆಡ್ (0), ಅಭಿಷೇಕ್ ಶರ್ಮಾ (8), ಇಶಾನ್ ಕಿಶನ್ (1) ಮತ್ತು ನಿತೀಶ್ ರೆಡ್ಡಿ (2) ದೊಡ್ಡ ಸ್ಕೋರ್‌ಗಳನ್ನು ಗಳಿಸುವಲ್ಲಿ ವಿಫಲರಾದರು. ಇದಾದ ನಂತರ, ಹೆನ್ರಿಕ್ ಕ್ಲಾಸೆನ್ ಮತ್ತು ಅಭಿನವ್ ಮನೋಹರ್ ತಂಡದ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ಇವರಿಬ್ಬರ ನಡುವೆ ಆರನೇ ವಿಕೆಟ್‌ಗೆ 99 ರನ್‌ಗಳ ಬೃಹತ್ ಪಾಲುದಾರಿಕೆ ಇತ್ತು.