IPL 2025: SRH ವಿರುದ್ಧ ಮುಂಬೈಗೆ ಭರ್ಜರಿ ಜಯ: ಗೆಲುವಿನ ಸೀಕ್ರೆಟ್ ಬಗ್ಗೆ MI ಕ್ಯಾಪ್ಟನ್ ಹೇಳಿದ್ದೇನು?

0
Spread the love

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ SRH ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆದ್ದು ಬೀಗಿದೆ.

Advertisement

ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಜಯವು ನಿಜಕ್ಕೂ ಖುಷಿ ಕೊಟ್ಟಿದೆ. ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ನೋಡಿ ಸಂತೋಷವಾಯಿತು. ಎಲ್ಲಾ ಆಟಗಾರರು ಫಾರ್ಮ್‌ನಲ್ಲಿರುವಾಗ, ನಾವು ಪ್ರಾಬಲ್ಯ ಸಾಧಿಸುತ್ತೇವೆ. ಇದುವೇ ನಮ್ಮ ಗೆಲುವಿನ ಸೀಕ್ರೆಟ್ ಎಂದಿದ್ದಾರೆ.

ಇನ್ನು ದೀಪಕ್ ಚಹರ್ ಮತ್ತು ಟ್ರೆಂಟ್​ ಬೌಲ್ಟ್ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗೆ ಪ್ರತಿಯೊಬ್ಬರು ಉತ್ತಮ ಪ್ರದರ್ಶನ ನೀಡಿದರೆ ಗೆಲುವು ಸುಲಭ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದೇ ವೇಳೆ ದೀಪಕ್ ಚಹರ್​ಗೆ ಸತತ 4 ಓವರ್​ಗಳನ್ನು ನೀಡಿರುವ ಬಗ್ಗೆ ಕೇಳಿದಾಗ, ಕೆಲ ಬಾರಿ ಪರಿಸ್ಥಿತಿಗೆ ಅನುಗುಣವಾಗಿ ನಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅನೇಕ ವಿಷಯಗಳನ್ನು ಮುಂಚಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಅವರು ಪವರ್‌ಪ್ಲೇನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದರು. ಹೀಗಾಗಿ ಓವರ್ ಅನ್ನು ನಿಲ್ಲಿಸಲು ಯಾವುದೇ ಕಾರಣವಿರಲಿಲ್ಲ. ಹೀಗಾಗಿ ಅವರಿಂದಲೇ ಬ್ಯಾಕ್ ಟು ಬ್ಯಾಕ್ ಓವರ್​ಗಳನ್ನು ಹಾಕಿಸಿದೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಪಂದ್ಯದ ಬಗ್ಗೆ ನೋಡುವುದಾದರೆ…

ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 143 ರನ್​ ಕಲೆಹಾಕಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (70) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 15.4 ಓವರ್​ಗಳಲ್ಲಿ 146 ರನ್ ಬಾರಿಸಿ 7 ವಿಕೆಟ್​ಗಳ ಗೆಲುವು ದಾಖಲಿಸಿದೆ.


Spread the love

LEAVE A REPLY

Please enter your comment!
Please enter your name here