HomeKarnataka News28 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಮ್ತಾಜ್ ಮೃತದೇಹ ಪತ್ತೆ!

28 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಮುಮ್ತಾಜ್ ಮೃತದೇಹ ಪತ್ತೆ!

For Dai;y Updates Join Our whatsapp Group

Spread the love

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ, ಮಾಜಿ ಎಂ.ಎಲ್.ಸಿ ಬಿ.ಎಂ.ಫಾರೂಕ್ ಅವರ ತಮ್ಮ ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಮುಳುಗು‌ ತಜ್ಞರು ಮೃತದೇಹವನ್ನು ಹೊರತೆಗೆದಿದ್ದು ಮೃತದೇಹ ಕಂಡು ಮಾಜಿ ಶಾಸಕ ಮೊಯಿದ್ದೀನ್ ಬಾವಾ ಕಣ್ಣೀರು ಹಾಕಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಉದ್ಯಮಿ ಮುಮ್ತಾಜ್ ಅಲಿ ಅವರ BMW ಕಾರು ಮಂಗಳೂರು ಹೊರವಲಯದ ಕೂಳೂರು ಸೇತುವೆ ಮೇಲೆ ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!