ಮುಂಡಗೋಡ:- ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಜರುಗಿದೆ.
ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ತಾಲೂಕು ಪಂಚಾಯತ್ ನೀಡುವ ಆಹಾರ ಧಾನ್ಯಗಳು ಕಳಪೆ ಮಟ್ಟದ್ದು ಎಂದು ಹೇಳಲಾಗಿದೆ. 22 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವನೆ ಮಾಡಿ ಅಸ್ವಸ್ತಗೊಂಡಿದ್ದಾರೆ. ಈ ಬಗ್ಗೆ ಶಿಕ್ಷಕರನ್ನು ಕೇಳಿದಾಗ ಸರಿಯಾದ ಉತ್ತರ ನೀಡದೆ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಸೇವನೆ ಮಾಡಿದ ಆಹಾರದಲ್ಲಿ ಇಲಿ ಹಿಕ್ಕೆ ಪತ್ತೆಯಾಗಿದೆ. ಮುಂಡಗೋಡಿನ ಶಾಲೆಯಲ್ಲಿ 400 ವಿದ್ಯಾರ್ಥಿಗಳಿದ್ದು, ಅದರಲ್ಲಿ 22 ಜನ ಅಸ್ವಸ್ತಗೊಂಡಿದ್ದಾರೆ. ಇದರಲ್ಲಿ 12 ಮಕ್ಕಳನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಉಳಿದವರು ಚೇತರಿಸಿಕೊಂಡಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡುತ್ತಿದ್ದ ವೇಳೆ ಇಲಿ ಹಿಕ್ಕೆಗಳು ಕಂಡು ಬಂದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಮ್ನಲ್ಲಿ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯ ಮಕ್ಕಳ ಆರೋಗ್ಯಕ್ಕೆ ಮಾರಕವಾಗಿದೆ. ಆಹಾರ ಗುಣಮಟ್ಟ ಪರೀಕ್ಷೆ ಮತ್ತು ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ ಕೇಳಿಬಂದಿದೆ.


