ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳತನವಾದ 72 ಗಂಟೆಯಲ್ಲಿ ಆರೋಪಿ ಅರೆಸ್ಟ್

0
Spread the love

ಗದಗ: ಮನೆಯ ಹಿಂದಿನ ಬಾಗಿಲಿನ ಬೀಗ ಒಡೆದು ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗದಗ ಜಿಲ್ಲೆ ಮುಂಡರಗಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಮುಂಡರಗಿ ಪಟ್ಟಣದ ಹುಡೇದ ಓಣಿಯ ನಿವಾಸಿ ಕಾರ್ತಿಕ ಕೊಂಪಿ ಬಂಧಿತ ಆರೋಪಿಯಾಗಿದ್ದು, ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಸ್ವಾಮಿ ವಿವೇಕಾನಂದ ನಗರದ ರತ್ನಾ ಅಂಗಡಿಯವರ ಮನೆಯಲ್ಲಿ ಯಾರು ಇಲ್ಲದ ಕಾರಣ 4 ಲಕ್ಷ 20 ಸಾವಿರ ಮೌಲ್ಯದ ಚಿನ್ನಾಭರಣ, 6 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದನು.

ಅದಲ್ಲದೆ ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಕಳೆದ ಒಂದುವರೆ ವರ್ಷ ಜೈಲ್ ನಲ್ಲಿದ್ದ ಕಾರ್ತಿಕ, ಜುಲೈ 16 , 2024 ರಂದು ಜಾಮೀನು ಮೇಲೆ ಹೊರಗೆ ಬಂದಿದ್ದನು. ಜೈಲ್ ನಿಂದ ಹೊರಗೆ ಬಂದ ತಕ್ಷಣ ಮತ್ತೆ ಕಳ್ಳತನ ಚಾಳಿ ಮುಂದುವರೆಸಿದ್ದಾನೆ.

ಇನ್ನೂ ಘಟನೆ ಸಂಬಂಧ ಗದಗ ಜಿಲ್ಲೆ ಮುಂಡರಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನವಾದ 72 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ


Spread the love

LEAVE A REPLY

Please enter your comment!
Please enter your name here