ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 17ಮಂದಿಯ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಲಿದ್ದು, ಇಂದು ಮತ್ತೆ ವಿಚಾರಣೆ ನಡೆಯಲಿದೆ.
ಈವರೆಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸದ ನಟ ದರ್ಶನ್ ಚಾಜ್ ಶೀಟ್ ಸಲ್ಲಿಕೆ ಬೆನ್ನಲ್ಲೆ ವಕೀಲರೊಂದಿಗೆ ಕೆಲವು ವಿಷಯಗಳನ್ನು ಚರ್ಚಿಸಿದ್ದಾರೆ. ಇದೀಗ ನಟ ದರ್ಶನ್ ಹಾಗೂ ಸಹಚರರು ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ.
ಸದ್ಯ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ, ಪ್ರದೂಷ್ ಬೆಳಗಾವಿ ಜೈಲು ಸೇರಿದಂತೆ ಕೆಲವು ಆರೋಪಿಗಳು ಬೇರೆ ಬೇರೆ ಕಾರಾಗೃಹಕ್ಕೆ ಸ್ಥಳಾಂತರಗೊಂಡಿದ್ದರು. ಪವಿತ್ರಾಗೌಡ ಸೇರಿದಂತೆ ಮತ್ತೆ ಕೆಲವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿಯೇ ಉಳಿದಿದ್ದರು. ಇಂದು ಅವರೆಲ್ಲರನ್ನು ಪೊಲೀಸರು ಜೈಲಿನಿಂದಲೇ ವಿಡಿಯೋ ಕಾನ್ಸ್‌ರೆನ್ಸ್ ಮೂಲಕ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.
ಆರೋಪಿ ನಟ ದರ್ಶನ್ ಪ್ರೇಯಸಿ, ನಟಿ ಪವಿತ್ರಾಗೌಡ ಪ್ರಕರಣದಲ್ಲಿ A1 ಆರೋಪಿಯಾಗಿದ್ದು, ಇತ್ತೀಚೆಗೆ ಸಲ್ಲಿಸಿದ್ದ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಚಾರ್ಜ್ ಶೀಟ್ ಸಲ್ಲಿಸಿದ ಬೆನ್ನಲ್ಲೆ ಆಕೆಯು ಸಹ ಇಂದು ಮತ್ತೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.