Murder Case: ಕೊಲೆ ಕೇಸ್: ಇಂದು ಜಡ್ಜ್ ಮುಂದೆ ಡಿ ಗ್ಯಾಂಗ್ ಹಾಜರು!

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಮತ್ತವರ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದು, ಇಂದು ಜಡ್ಜ್ ಮುಂದೆ ಹಾಜರಾಗೋ ಸಾಧ್ಯತೆ ಇದೆ.

Advertisement

ಹೀಗಾಗಿ, ಅವರನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ಈ ವೇಳೆ ಅವರುಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ಜಡ್ಜ್​ ಮುಂದೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ. ನಟ ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ಇದರ ಜೊತೆಗೆ ಅವರು ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಇದರ ನಡುವೆ ಮನೆ ಊಟ ಕಲ್ಪಿಸುವಂತೆ ಕೋರಿ ರಿಟ್ ಅರ್ಜಿಯೂ ಇಂದು ವಿಚಾರಣೆ ನಡೆಯಲಿದೆ. ನಟ ದರ್ಶನ್ ಅರ್ಜಿಗೆ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಿಂದಲೂ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.


Spread the love

LEAVE A REPLY

Please enter your comment!
Please enter your name here