ಕೊಲೆ ಪ್ರಕರಣ: ನಟ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ವರದಿಯಲ್ಲಿ ದೃಢ!

0
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.

Advertisement

ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು.

ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here