ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A2 ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಈ ಮೂಲಕ ಹೈಕೋರ್ಟ್ ತೀರ್ಪಿನತ್ತ ದರ್ಶನ್ ಅಭಿಮಾನಿಗಳು ಹಾಗೂ ಕುಟುಂಬದವರ ಚಿತ್ತ ನೆಟ್ಟಿದೆ.
ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದ್ದಾರೆ. ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.
ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಜಾಮೀನು ಅವಧಿ ವಿಸ್ತರಿಸುವಂತೆ ಆರೋಪಿ ದರ್ಶನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ತೀರ್ಪು ಯಾರ ಪರ ಬರಲಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ.