ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 28 ಕೊಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
Advertisement
ವಿಧಾನಸಭೆಯ ಪ್ರಶ್ನೋತ್ತರ ಅವಧಿ ವೇಳೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಸರ್ಕಾರ ಅಷ್ಟೊಂದು ಅಸಹಾಯಕವಾಗಿಲ್ಲ.
ಆ ವ್ಯಕ್ತಿಯನ್ನು ದೊಡ್ಡವನು ಮಾಡೋದು ಬೇಡ. ಅವನ ವಿರುದ್ಧ ಈಗಾಗಲೇ ಹತ್ತಾರು ಪ್ರಕರಣಗಳಿವೆ. ಸಮಾಜದಲ್ಲಿ ಇಂತಹ ವ್ಯಕ್ತಿಗಳನ್ನು ಬಿಡಲು ಸಾಧ್ಯವಿಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ, ಅವನಿಗೆ ತಕ್ಕ ಶಿಕ್ಷೆ ದೊರೆಯುತ್ತದೆ,ಎಂದು ಹೇಳಿದ್ದಾರೆ.