HomeCrime Newsಕಟ್ಟಿಗೆಯಿಂದ ಹೊಡೆದು ಅಳಿಯನ ಕೊಲೆ: ಆರೋಪಿ ಮಾವನಿಗೆ ಜೀವಾವಧಿ ಶಿಕ್ಷೆ!

ಕಟ್ಟಿಗೆಯಿಂದ ಹೊಡೆದು ಅಳಿಯನ ಕೊಲೆ: ಆರೋಪಿ ಮಾವನಿಗೆ ಜೀವಾವಧಿ ಶಿಕ್ಷೆ!

For Dai;y Updates Join Our whatsapp Group

Spread the love

ಕಾರವಾರ: ಮದ್ಯ ಸೇವಿಸಲು ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ತನ್ನ ಅಳಿಯನನ್ನು ಕೊಲೆ ಮಾಡಿದ ಮಾವನಿಗೆ ಕಾರವಾರ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2024ರ ಮೇ 2ರಂದು ಮನೆಯ ಸದಸ್ಯರು ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇದ್ದ ಅಳಿಯನ ಮೇಲೆ ಆರೋಪಿ ಕಟ್ಟಿಗೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭಾರತ ದಂಡ ಸಂಹಿತೆಯ ಕಲಂ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕ ರಾಜೇಶ್ ಎಂ. ಮಳಗಿಕರ್ ವಾದ ಮಂಡಿಸಿದ್ದು, ಆರೋಪಿತನ ವಿರುದ್ಧ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು. ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸೀತಾರಾಮ ಅವರು ಕೂಡ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯಗಳನ್ನು ಒದಗಿಸಿದರು.

ಇದಲ್ಲದೆ, ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಹೆಡ್ ಕಾನ್‌ಸ್ಟೇಬಲ್ ಮಹೇಶ್ ನಾಯ್ಕ್ ಹಾಗೂ ಕಾನ್‌ಸ್ಟೇಬಲ್ ಶಂಕರಾಚಾರಿ ಎನ್ ಸಹಕರಿಸಿದ್ದರು.

ಪ್ರಕರಣದ ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಶಿರಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠಾಸೀನ ನ್ಯಾಯಾಧೀಶ ಕಿರಣ ಕಿಣಿ ಅವರು ಆರೋಪಿತನ ವಿರುದ್ಧ ಆರೋಪ ಸಾಬೀತಾಗಿರುವುದಾಗಿ ತೀರ್ಮಾನಿಸಿದರು.

ಅದರಂತೆ, ಆರೋಪಿಗೆ ಜೀವಾವಧಿ ಕಾರಾಗೃಹ ಶಿಕ್ಷೆಯ ಜೊತೆಗೆ 10,000 ರೂ. ದಂಡ ವಿಧಿಸಲಾಗಿದೆ. ಜೊತೆಗೆ ಮೃತನ ಪತ್ನಿಗೆ 50,000 ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದು, ಹೆಚ್ಚಿನ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪಡೆಯಬಹುದಾಗಿದೆ ಎಂದು ತಿಳಿಸಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!