ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ: ತನಿಖೆಗೆ ಆಗ್ರಹಿಸಿದ ಬಿ.ವೈ ವಿಜಯೇಂದ್ರ

0
Spread the love

ಬೆಂಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ  ಶೀಘ್ರವೇ ತನಿಖೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

Advertisement

ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆ.ವಿ.ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಅವರು ಹತ್ಯೆಗೀಡಾಗಿರುವ ಘಟನೆ ಅತ್ಯಂತ ಅಮಾನವೀಯ ಹಾಗೂ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದುರ್ಘಟನೆಯನ್ನು ಖಂಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಕೊಲೆಗಡುಕರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಲಿ ಎಂದು ಆಗ್ರಹಿಸಿದ್ದಾರೆನೊಂದ ಕುಟುಂಬಕ್ಕೆ ನ್ಯಾಯ ಸಿಗಲಿ. ಮೃತರ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here