ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ: ಭಾಸ್ಕರ್ ರಾವ್ ವಾಗ್ದಾಳಿ

0
Spread the love

ಬೆಂಗಳೂರು: ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ ಎಂದು ಬಿಜೆಪಿ ಮುಖಂಡ ಭಾಸ್ಕರ್​ ರಾವ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದ ಹಸುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಸಚಿವ ಜಮೀರ್ ಮೂರು ಹಸುಗಳನ್ನು ಕೊಡಿಸುತ್ತೇನೆ ಅಂದಿದ್ದಾರೆ.

Advertisement

ಸಚಿವ ಜಮೀರ್​ಗೆ ಭಾವನೆಯೇ ಇಲ್ಲ, ಅದೇನು ಆಟದ ವಸ್ತುವೇ? ಸಾವಿರ ಗೋವು ತಂದು ಕೊಟ್ಟರೂ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ. ಜಮೀರ್ ಮಾಡುತ್ತಿರುವ ಈ ಕೆಲಸವನ್ನು ಮುಸ್ಲಿಮರೇ ಮೆಚ್ಚುವುದಿಲ್ಲ ಎಂದು ವಾಗ್ದಾಳಿ ಮಾಡಿದರು.

ಇನ್ನೂ ಮುಸ್ಲಿಮರಲ್ಲಿ ಒಳ್ಳೆಯವರಿದ್ದಾರೆ, ಆದರೆ ನಾಯಕತ್ವ ಪ್ರಶ್ನಿಸುತ್ತಿದ್ದೇನೆ. ಎಫ್​ಐಆರ್​ ಸರಿಯಾಗಿ ಹಾಕಿಲ್ಲ, ಅಮಾಯಕನನ್ನು ಕರೆತಂದು ಕೂರಿಸಿದ್ದಾರೆ. ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ್ದಾರೆ. ಪ್ರಕರಣ ಮುಚ್ಚಿಹಾಕಲು ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ನಿಜವಾದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here