ಬೆಂಗಳೂರು: ನಗರದ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣದ ಸಂಬಂಧ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪೋಲಿಸರು, ರಿಕ್ಕಿ ರೈಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಕಾರಿನ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂಬುದನ್ನು ಪರಿಶೀಲಿಸಲು ಆರ್‌ಟಿಒಗೆ ಪತ್ರ ಸಹ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪೊಲೀಸರು ಸಂಗ್ರಹಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ಕಾರ್ ಡ್ರಿಫ್ಟಿಂಗ್ ವಿಡಿಯೋ ವೈರಲ್ ಆಗಿದ್ದು, ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು–ಮೂರು ಬಾರಿ ಈ ರೀತಿಯ ಘಟನೆ ನಡೆದಿರುವುದಾಗಿ ದಾಖಲಾಗಿದೆ.



