ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಕೇಸ್:‌ ಮುತ್ತಪ್ಪ ರೈ 2ನೇ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ FIR

0
Spread the love

ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ಜಿಲ್ಲೆಯ ಬಿಡದಿ ಬಳಿ ದುಷ್ಕರ್ಮಿ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ರಿಕ್ಕಿ ರೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದು, ಮೂಗು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ.

Advertisement

ಸದ್ಯ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.


Spread the love

LEAVE A REPLY

Please enter your comment!
Please enter your name here