ರಾಮನಗರ: ಮಾಜಿ ಅಂಡರ್‌ವರ್ಲ್ಡ್ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸ್ಟೋಟಕ ಮಾಹಿತಿಗಳು ಹೊರ ಬರುತ್ತಿವೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಮನೆಯ ಭದ್ರತೆ ನೋಡಿಕೊಳ್ಳುತ್ತಿದ್ದ ವಿಠ್ಠಲ್‌ನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಏ.18ರ ಮಧ್ಯರಾತ್ರಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇದು ಸುಪಾರಿ ಕಿಲ್ಲರ್‌ನಿಂದ ನಡೆದ ಅಟ್ಯಾಕಾ ಅಥವಾ ಜೊತೆಯಲ್ಲಿದ್ದವರಿಂದಲೇ ನಡೆದ ಕೊಲೆ ಯತ್ನವಾ ಎಂಬ ಅನುಮಾನದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳು ಮಹತ್ವದ ಸುಳಿವು ನೀಡಿವೆ.
ಮನೆಗೆಲಸದವರು, ಗನ್ ಮ್ಯಾನ್‌ಗಳು, ಸೆಕ್ಯುರಿಟಿ, ಮ್ಯಾನೇಜರ್ ಹಾಗೂ ಆಡಿಟರ್‌ಗಳನ್ನ ವಿಚಾರಣೆ ಮಾಡಿದ್ದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ ವಿಚಾರಣಾಧೀನರ ಹೇಳಿಕೆಗೂ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯಗಳಿಗೂ ತಾಳೆ ಆಗದಿರುವುದು ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ ಬಂದಿದೆ.
ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಿಕ್ಕಿ ರೈ ಮನೇಲಿಯಲ್ಲಿನ ಗನ್ ಹಾಗೂ ಬುಲೆಟ್ಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.