ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು
ಸೂಚನೆ ನೀಡಿದ್ದಾರೆ. ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.



