ನವದೆಹಲಿ: ಪಹಲ್ಗಾಂ ಭಯೋತ್ಪಾದಕ ದಾಳಿಯ ನಂತರ ನಡೆಯಲಿರುವ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯವನ್ನು ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
Advertisement
ಲೋಕಸಭೆಯಲ್ಲಿ ನಡೆದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಕುರಿತು ಚರ್ಚೆಯಲ್ಲಿ ಮಾತನಾಡಿದ ಓವೈಸಿ, ಭಾರತ–ಪಾಕಿಸ್ತಾನ ಪಂದ್ಯ ರದ್ದತಿಗೆ ಪ್ರತಿಪಕ್ಷಗಳು ನಡೆಸುತ್ತಿರುವ ಆಕ್ರೋಶವನ್ನು ಬೆಂಬಲಿಸಿದರು. ಪಂದ್ಯವನ್ನು ವೀಕ್ಷಿಸಲು ನನ್ನ ಆತ್ಮಸಾಕ್ಷಿ ವಿರೋಧಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.
ಮೂರು ದಿನಗಳ ಹಿಂದೆ ಪ್ರಕಟಗೊಂಡ ಏಷ್ಯಾಕಪ್ 2025 ವೇಳಾಪಟ್ಟಿಯಂತೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 14ರಂದು ಪಂದ್ಯವನ್ನು ಆಡಲಿವೆ. ಈ ಪಂದ್ಯದ ಆಯೋಜನೆಗೆ ಹಲವು ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದೆ.