ದಾವಣಗೆರೆ:- ದಾವಣಗೆರೆ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
ಪುತ್ರನ ಪರವಾಗಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ‘ಬಿ’ ಫಾರಂ ಪಡೆದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ಪುತ್ರ ಸಮರ್ಥ್‌ಗೆ ಟಿಕೆಟ್ ಘೋಷಣೆ ಆಗಿದೆ. ದಾವಣಗೆರೆ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಸಿಎಂ, ಡಿಸಿಎಂ, ಸುರ್ಜೇವಾಲ, ಅಲ್ಪಸಂಖ್ಯಾತ ನಾಯಕರಿಗೆ ಧನ್ಯವಾದ ಹೇಳ್ತೀನಿ. ನಿನ್ನೆಯ ಸಭೆಯಲ್ಲಿ ರಾಜಿ ಸಂಧಾನ ಮಾಡಿದ್ರು. ನಾವೆಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ವಿ. ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಯಾವುದೇ ಗೊಂದಲ ಇಲ್ಲ. ಅಣ್ಣ-ತಮ್ಮಂದಿರ ರೀತಿ ಇದ್ದೇವೆ ಎಂದು ಹೇಳಿದರು.



