ಮೈಸೂರು: ಕಂದಕಕ್ಕೆ ಉರುಳಿಬಿದ್ದು ಕಾಡಾನೆ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಗಂಡಾನೆ ಕಂದಕಕ್ಕೆ ಬಿದ್ದು ಮೃತಪಟ್ಟಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಕಂದಕ ನಿರ್ಮಿಸಿದ್ದರು.
Advertisement
ಆಹಾರ ಅರಸಿ ಗ್ರಾಮದ ಕಡೆ ಬರುವಾಗ ಕಾಡಾನೆ ಕಂದಕಕ್ಕೆ ಬಿದ್ದಿದೆ. ಕಂದಕದಲ್ಲಿ ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಕಾಡಾನೆಯನ್ನು ಕಂಡ ಜನ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಾಡಾನೆ ಕೊನೆಯುಸಿರೆಳೆದಿದೆ.