ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನದ ಅಂಗಡಿಯಲ್ಲಿ ಹಾಡಹಗಲೇ ಭೀಕರ ದರೋಡೆ ನಡೆದಿದೆ.
ಐದಕ್ಕೂ ಹೆಚ್ಚು ಜನರ ಗುಂಪು, ಮಧ್ಯಾಹ್ನದ ವೇಳೆಗೆ ಅಂಗಡಿಗೆ ಏಕಾಏಕಿ ನುಗ್ಗಿ, ಗನ್ ತೋರಿಸುವ ಮೂಲಕ ಭಯ ಮೂಡಿಸಿದ್ದಾರೆ. ಬಳಿಕ ಸುಮಾರು 4 ರಿಂದ 5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.
ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಬೈಪಾಸ್ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸಿಸಿಟಿವಿ ಫೂಟೇಜ್ ಹಾಗೂ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.



