ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲು!

0
Spread the love

ಮೈಸೂರು: ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳಾಗಿದ್ದು, ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ ಎಂಬುವರ ಪುತ್ರ ಮೋಹಿತ್ (8) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Advertisement

ಇಂದು ಮಧ್ಯಾಹ್ನದ ಸಮಯದಲ್ಲಿ ಬದನವಾಳು ಗ್ರಾಮದಲ್ಲಿರುವ ಕೆರೆಗೆ ಈಜಲು ಹೋಗಿದ್ದರು. ಈ ವೇಳೆ ಕೆರೆಯ ಸುಳಿಗೆ ಸಿಲುಕಿ ಮೇಲೆ ಬಾರದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಮೋಹಿತ್ ಎಂಬ ಬಾಲಕ ಮೂರನೇ ತರಗತಿ, ಆರ್ಯ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ದಸರಾ ರಜೆ ಹಿನ್ನೆಲೆಯಲ್ಲಿ ಮಕ್ಕಳು ಕೆರೆಗೆ ಈಜಲು ಹೋಗಿಮೃತಪಟ್ಟಿದ್ದಾರೆ. ಸ್ಥಳಕ್ಕೆ ಕವಲಂದೆ ಪೊಲೀಸ್ ಪಿಎಸ್ಐ ಬಸವರಾಜು ಭೇಟಿ ಪರಿಶೀಲನೆ ನಡೆಸಿದ್ದು, ಮೃತ ಮಕ್ಕಳನ್ನು ಕಂಡು ಎರಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here