ಮೈಸೂರು ದಸರಾ: ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

0
Spread the love

ಮೈಸೂರು:  ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆ ಅರಮನೆ ಆವರಣದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 6ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ಅಭಿಮನ್ಯು ಸಾಗಿದ್ದು, ಮಾವುತ ವಸಂತ ಆನೆಯನ್ನ ಮುನ್ನಡೆಸಿದ್ದಾರೆ.

Advertisement

ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ.

ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ವೇಳೆ ಡಿಸಿಎಂ ಡಿಕೆಶಿ, ಸಂಸದ ಮತ್ತು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಕನ್ನಡ & ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕ ತನ್ವೀರ್ ಸೇಠ್​, ಡಿಸಿ ಲಕ್ಷ್ಮೀಕಾಂತರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here