• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಮೈಸೂರು ದಸರಾ: ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿಎಂ ಸೂಚನೆ

Vijaya Sakshi by Vijaya Sakshi
June 28, 2025
in Karnataka News
0
ಮೈಸೂರು ದಸರಾ: ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿಎಂ ಸೂಚನೆ
0
SHARES
0
VIEWS
Share on FacebookShare on Twitter

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು.
ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

• ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು. – ಡಾ. ಹೆಚ್.ಸಿ.ಮಹದೇವಪ್ಪ

• ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು-ತನ್ವೀರ್‌ ಸೇಠ್

• ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು- ಜಿ.ಟಿ.ದೇವೇಗೌಡ

• ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

Tags: BreakingNewsKannadaLatestNewsKarnatakamysore dasarasiddaramaihVijayasakshivijayasakshinews
Previous Post

ಬ್ಲಾಕ್ ಮ್ಯಾಜಿಕ್’ಗಾಗಿ ಸಾಕಿದ ನಾಯಿ ಕತ್ತು ಕತ್ತರಿಸಿ ಅಪಾರ್ಟ್‌ಮೆಂಟ್’ನಲ್ಲೇ ಬಚ್ಚಿಟ್ಟ ಮಹಿಳೆ!

Next Post

ಸಿಎಂ ಬದಲಾವಣೆ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ: ಸಚಿವ ಕೆಎನ್ ರಾಜಣ್ಣ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನಟ ದರ್ಶನ್ ಸಮಾಜಕ್ಕೆ ರೋಲ್ ಮಾಡೆಲ್ಲ? ಬರೀ ಅವನದ್ದೇ ಸುದ್ದಿ: ಕೆ.ಎನ್.ರಾಜಣ್ಣ ಗರಂ

ಸಿಎಂ ಬದಲಾವಣೆ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ: ಸಚಿವ ಕೆಎನ್ ರಾಜಣ್ಣ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

October 22, 2026
ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

October 22, 2026
ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಖತರ್ನಾಕ್ ಕಳ್ಳ! ಮೊಬೈಲ್ ಅಂಗಡಿಗೆ ಕನ್ನ ಹಾಕಿ ₹15 ಲಕ್ಷದ ಫೋನ್ ದೋಚಿದ್ದ ಆರೋಪಿ ಅರೆಸ್ಟ್

ಯೂಟ್ಯೂಬ್ ನೋಡಿ ಕಳ್ಳತನ ಕಲಿತ ಖತರ್ನಾಕ್ ಕಳ್ಳ! ಮೊಬೈಲ್ ಅಂಗಡಿಗೆ ಕನ್ನ ಹಾಕಿ ₹15 ಲಕ್ಷದ ಫೋನ್ ದೋಚಿದ್ದ ಆರೋಪಿ ಅರೆಸ್ಟ್

October 22, 2026
ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

ತಾಯಿ ಜೈಲಿನಲ್ಲಿ, ಪುಟ್ಟ ಕಂದಮ್ಮನಿಗೆ ಯಾರು ಆಸರೆ? ಮುಸ್ಕಾನ್ ಮಗುವನ್ನು ದತ್ತು ಪಡೆಯಲು ಮುಂಬೈ ಇನ್ ಫ್ಲುಯೆನ್ಸರ್ ಅರ್ಜಿ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

ಪತ್ನಿಯ ಮೇಲೆ ಅನುಮಾನವೇ ಕೊಲೆಗೆ ಕಾರಣವಾಯ್ತಾ? ಹೆಂಡತಿಯನ್ನು ಹತ್ಯೆಗೈದು ರಾಜಕಾಲುವೆಗೆ ಎಸೆದ ಪತಿ, 9 ದಿನಗಳ ಬಳಿಕ ಬಯಲಾದ ಸತ್ಯ!

October 22, 2026
ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

ನನ್ನ ಮಗನ ಬಗ್ಗೆ ಯಾವಾಗಲೂ ಹೆಮ್ಮೆ ಇದೆ: ಫೋಟೋ ಪ್ರದರ್ಶನ ವಿವಾದದಲ್ಲಿ ರೈಹಾನ್ ವಾದ್ರಾ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link