ಮೈಸೂರು: ನವರಾತ್ರಿಯ ಕೊನೆಯ ದಿನ ವಿಜಯದಶಮಿ ಅಥವಾ ದಸರಾ. ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಇಂದು (ಅ.24) ಜಂಬೂ ಸವಾರಿ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆ ನಡುವೆ ದಸರಾ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ. ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
Advertisement
ಅಭಿಮನ್ಯು ಸತತ ನಾಲ್ಕನೇ ಬಾರಿಗೆ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಲಿವೆ. ಜಂಬೂಸವಾರಿ ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗಲಿದೆ. ದಸರಾ ಜಂಬೂಸವಾರಿಗೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ.