ಮೈಸೂರು: ತಿ.ನರಸೀಪುರದ ಬಳಿ ಸ್ಪೋಟಕ ವಸ್ತುಗಳು ಪತ್ತೆ.!

0
Spread the love

ಮೈಸೂರು: ಸ್ಪೋಟಕ ವಸ್ತುಗಳು ಪತ್ತೆಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯಿರುವ ಫ್ರೆಂಡ್ಸ್ ಹೋಟೆಲ್ ಬಳಿ ನಡೆದಿದೆ. ಅಪರಿಚತರು ಸ್ಪೋಟಕ ವಸ್ತುಗಳನ್ನು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್ ನಲ್ಲಿ ಇಟ್ಟು ಹೋಗಿದ್ದಾರೆ. ಹೋಟೆಲ್ ಸಿಬ್ಬಂದಿ ಅದನ್ನು ತೆಗೆದು ನೋಡಿ ಗಾಬರಿಯಿಂದ ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ತಜ್ಞರು ಸ್ಪೋಟಕ  ವಸ್ತುಗಳನ್ನು ಪರಿಶೀಲನೆ ಮಾಡಿದ್ದಾರೆ.

Advertisement

ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದ್ದು, ಸ್ಪೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ‌. ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಸಬಹುದಾದ ಸ್ಪೋಟಕ ವಸ್ತುಗಳು ಎಂದು ಹೇಳಲಾಗುತ್ತಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here