Mysore: ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ! 8 ಮಂದಿ ವಶಕ್ಕೆ

0
Spread the love

ಮೈಸೂರು: ಮೈಸೂರು ತಾಲ್ಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 6 ಪುರುಷರು ಹಾಗೂ 2 ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ದಾಸನಕೊಪ್ಪಲಿನ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿತ್ತು ಎಂಬ ಮಾಹಿತಿಯ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ವ್ಯಕ್ತಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೆಚ್ಚಾಗಿ ಯುವತಿಯರನ್ನು ಹಣ ಕೊಡಿಸಿ ಬೇರೆ ಬೇರೆ ಕಡೆಗಳಿಂದ ಕರೆಸಿಕೊಳ್ಳಲಾಗುತ್ತಿತ್ತು. ನಂತರ ಹೋಟೆಲ್ ಅಥವಾ ಬಾಡಿಗೆ ಮನೆಗಳನ್ನು ತಿಂಗಳಿಗೊಮ್ಮೆ ಬದಲಾಯಿಸಿ ದಂಧೆ ನಡೆಯುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಪ್ರಕರಣದಲ್ಲಿ ಮಂಜು ಎಂಬಾತನನ್ನು ಪ್ರಮುಖ ಆರೋಪಿಯಾಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಇಬ್ಬರು ಯುವತಿಯರನ್ನು ಅನೈತಿಕ ಚಟುವಟಿಕೆಗಾಗಿ ಬಳಸುತ್ತಿದ್ದರಂತೆ. ಈ ಸಂಬಂಧ ಪ್ರಕರಣವನ್ನು ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here