HomeKarnataka News'ಕಾವೇರಿ'ಗೆ ಒಡಲಲ್ಲೇ ಕಂಟಕ: ವಿಷಜಲವಾದ ನದಿ

‘ಕಾವೇರಿ’ಗೆ ಒಡಲಲ್ಲೇ ಕಂಟಕ: ವಿಷಜಲವಾದ ನದಿ

For Dai;y Updates Join Our whatsapp Group

Spread the love

ಮಡಿಕೇರಿ:- ಕಾವೇರಿ ನದಿಗೆ ಒಡಲಲ್ಲೇ ಕಂಟಕ ಎದುರಾಗಿದೆ. ಕೋಟ್ಯಂತರ ಜನರ ಪಾಲಿನ ಸಂಜೀವಿನಿಯಾಗಿರೋ ಕಾವೇರಿ ನದಿ ತನ್ನ ಒಡಲಲ್ಲೇ ಕಲುಷಿತವಾಗುತ್ತಿದ್ದಾಳೆ.

ಕೊಡಗಿನ ಕಾಫಿ ತೋಟಗಳಲ್ಲಿ ಕಾಫಿ ಪಲ್ಪರ್ ನಡೆಯುತ್ತಿದ್ದು, ಅದರಿಂದ ಬರುವ ತ್ಯಾಜ್ಯವನ್ನ ನೇರವಾಗಿ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇನ್ನೂ ಕೆಲವರು ನದಿ ಅಂಚಿನಲ್ಲಿ ರೆಸ್ಟೋರೆಂಟ್, ರೆಸಾರ್ಟ್, ಹೋಂ ಸ್ಟೇಗಳನ್ನು ನಿರ್ಮಾಣ ಮಾಡಿಕೊಂಡು ನೇರವಾಗಿ ಕೊಳಚೆ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಹೀಗಾಗಿ ಕಾವೇರಿ ದಿನನಿತ್ಯ ಕಲುಷಿತವಾಗುತ್ತಿದ್ದಾಳೆ. ಅಲ್ಲದೇ ಅಯ್ಯಪ್ಪ ಮಾಲಾಧಾರಿಗಳು ಈ ನದಿಯಲ್ಲಿ ಸ್ನಾನ ಮಾಡಿದ್ರೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ.

ಕೆಲವು ಕಾಫಿ ತೋಟದ ಮಾಲೀಕರು, ರೆಸಾರ್ಟ್ ಮಾಲೀಕರು ಪ್ರಭಾವಿಗಳಾಗಿರುವುದರಿಂದ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸ್ಥಳೀಯ ಗ್ರಾಮ ಪಂಚಾಯ್ತಿಯವರು ಮೀನಾಮೇಷ ಎಣಿಸುತ್ತಿದ್ದಾರೆ ಅನ್ನೋ ಆರೋಪ ಕೂಡ ಇದೆ. ಹೀಗೆ ರಾಜಾರೋಷವಾಗಿ ಕಲುಷಿತ ನೀರು ಕಾವೇರಿ ನದಿಯನ್ನ ಸೇರುತ್ತಿದ್ದರೂ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿ ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಜಾಣ ಕುರುಡರಾಗಿ ಏನೂ ಗೊತ್ತಿಲ್ಲದಂತೆ ಮೂಕ ಪ್ರೇಕ್ಷಕರಾಗಿದ್ದಾರೆ.

ಈ ಬಗ್ಗೆ ಸ್ಥಳೀಯ ಜನರು ದೂರುಗಳ ಸುರಿಮಳೆಗೈದ್ರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೇವಲ ಕಾಫಿ ಪಲ್ಪರ್ ನೀರು ಮಾತ್ರವಲ್ಲದೇ ಇಡೀ ಗ್ರಾಮದ ಶೌಚಾಲಯದ ನೀರು ಕೂಡ ಕಾವೇರಿ ನದಿಗೆ ಸೇರುತ್ತಿದ್ದು, ಪರಿಶುದ್ಧವಾಗಿರೋ ಕಾವೇರಿ ನದಿ ನೀರು ಇದರಿಂದ ಕಲುಷಿತವಾಗುತ್ತಿದೆ.

ಒಂದು ಕಡೆ ಕಾಫಿ ಪಲ್ಪರ್ ನೀರು, ಮತ್ತೊಂದೆಡೆ ಶೌಚಾಲಯದ ನೀರು, ಇದರ ಜೊತೆಗೆ ಪ್ಲಾಸ್ಟಿಕ್ ಸೇರಿದಂತೆ ಕೆಲ ವಿಷತ್ಯಾಜ್ಯಗಳು ನದಿಯ ಒಡಲನ್ನ ನಿರಂತರವಾಗಿ ಸೇರುತ್ತಲೇ ಇದೆ. ಈ ಬಗ್ಗೆ ಗಮನ ವಹಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!