ಮೈಸೂರು: ಆನ್ ಲೈನ್ ಬೆಟ್ಟಿಂಗ್‌ʼಗೆ ಒಂದೇ ಕುಟುಂಬದ ಮೂವರು ಬಲಿ..!

0
Spread the love

ಮೈಸೂರು: ಐಪಿಎಲ್‌ ಬೆಟ್ಟಿಂಗ್.. ಇದು ಸಾವಿರಾರು ಕೋಟಿ ರೂ. ವ್ಯವಹಾರ.. ಬೆಟ್ಟಿಂಗ್‌ನ ಮೋಹಕ್ಕೆ ಸಿಲುಕಿ ಬದುಕನ್ನೇ ಹಾಳು ಮಾಡಿಕೊಳ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ತಾನೇ ಇದೆ. ಜೂಜಿನಲ್ಲಿ ಸೋತ ಸಾವಿರಾರು ಕುಟುಂಬಗಳು ಮನೆ ಮಠ ಕಳೆದುಕೊಂಡು ಬೀದಿಗೆ ಬೀಳುತ್ತಿವೆ. ಎಷ್ಟೋ ಮಂದಿ ಪ್ರಾಣವನ್ನೇ ಕಳೆದುಕೊಂಡ ಉದಾಹರಣೆ ಕೂಡಾ ಇದೆ.

Advertisement

ಇದೀಗ ಐಪಿಎಲ್ ಮತ್ತು ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಅಲಿಯಾಸ್​ ಸ್ವಾತಿ ಮೃತ ದುರ್ದೈವಿಗಳಾಗಿದ್ದು,

ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಆಲಿಯಾಸಿ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ಸೋಮವಾರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಜೋಶಿ ಆಂಥೋನಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ.

ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ. ಅವರಿಗೆ ಶಿಕ್ಷೆ ಕೊಡಿಸಿ” ಎಂದು ವಿಡಿಯೋದಲ್ಲಿ ಹೇಳಿ ನೇಣಿಗೆ ಶರಣದಾಗಿದ್ದಾರೆ.

ಜೋಶಿ ಆಂಥೋನಿ ಸಾವಿನ ವಿಚಾರ ತಿಳಿದು ತಮ್ಮ ಜೋಬಿ ಆಂಥೋನಿ ಹಾಗೂ ಈತನ ಪತ್ನಿ ಶರ್ಮಿಳಾ ಅಲಿಯಾಸಿ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಬಿ ಹಾಗೂ ಶರ್ಮಿಳಾ ಐಪಿಎಲ್ ಹಾಗೂ ಆನ್ ಲೈನ್ ಗೇಮ್​ನಲ್ಲಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದರು. ಸಾಲಗಾರರು ಪ್ರತಿ ನಿತ್ಯ ಮನೆಯ ಬಳಿ ಬಂದು ದುಡ್ಡು ಕೇಳುತ್ತಿದ್ದರು.

ಇದರಿಂದ ಮನನೊಂದ ಜೋಷಿ ಆಂಥೋನಿ ಸೋಮವಾರ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಜೋಬಿ ಹಾಗೂ ಶರ್ಮಿಳಾ ವಿಜಯನಗರದ ಕ್ರೀಡಾ ಮೈದಾನದ ಬಳಿ ನೇಣಿಗೆ ಶರಣಾಗಿದ್ದಾರೆ. ಈ ಸಂಭಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಾಗೂ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here