ಮೈಸೂರು: ಕೆರೆಯಲ್ಲಿ ಹಸು ತೊಳೆಯಲು ಹೋಗಿದ್ದ ಮೂವರು ನೀರುಪಾಲಾಗಿರುವಂತಹ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮುದ್ದೇಗೌಡ(48), ಬಸವೇಗೌಡ(45), ವಿನೋದ್(17) ಮೃತ ದುರ್ಧೈವಿಗಳಾಗಿದ್ದು,
Advertisement
ನಂಜನಗೂಡು ತಾಲೂಕಿನ ಕಾಮಳ್ಳಿಯಲ್ಲಿ ಹಸು ತೊಳೆಯಲು ಕಾಲುವೆಗೆ ಹೋದ ಮೂವರು ನೀರಿನಲ್ಲಿ ಆಯತಪ್ಪಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ನೋಡ ನೋಡ್ತಿದ್ದಂತೆ ದುರಂತ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಬಿಳಿಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಕೆರೆಯ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


