ನವದೆಹಲಿ:- ದೆಹಲಿಯಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರದಲ್ಲಿ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.
ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಬಂಧಿತ ಆರೋಪಿ. ಈತ ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿ ಜೊತೆ ನಿಕಟವಾಗಿ ಕೆಲಸ ಮಾಡಿದ್ದ. ಆತನಿಗೆ ಇವನೇ ತಾಂತ್ರಿಕ ಸಹಾಯವನ್ನು ಕೂಡ ನೀಡಿದ್ದ ಎಂದು ಆರೋಪಿಸಲಾಗಿದೆ.
ಅನಂತ್‌ನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿಯಾಗಿರುವ ಜಾಸಿರ್ ವಾನಿ, ದೆಹಲಿಯ ದಾಳಿಯ ಹಿಂದಿನ ಸಕ್ರಿಯ ಸಹ-ಸಂಚುಗಾರನಾಗಿದ್ದ. ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟಕ್ಕೆ ಮುಂಚಿತವಾಗಿ ಡ್ರೋನ್‌ಗಳನ್ನು ಮಾರ್ಪಡಿಸಿ ರಾಕೆಟ್‌ಗಳನ್ನು ತಯಾರಿಸಲು ಪ್ರಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನನ್ನು ಈಗ ದೆಹಲಿಗೆ ಕರೆತರಲಾಗಿದೆ. ಅಲ್ಲಿ ಆತನನ್ನು NIA ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುವುದು.
ಬಾಂಬ್ ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲು ಮಾಡಲು ವಿವಿಧ ಕೋನಗಳನ್ನು ಅನ್ವೇಷಿಸುವುದನ್ನು ಮುಂದುವರೆಸಿರುವುದಾಗಿ ತನಿಖಾ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.



