ಮೈಸೂರು: ನಂಜನಗೂಡಿನ ಕಪಿಲಾ ನದಿಯ ದಡದಲ್ಲಿ ಅರಣ್ಯ ಇಲಾಖೆ ಬೆಳೆಸಿದ್ದ 45 ವಿಭಿನ್ನ ಜಾತಿಯ ಮರಗಳನ್ನು ಯಾವುದೇ ಅನುಮತಿ ಪಡೆಯದೆ ಕಡಿದುಹಾಕಿದ ಆರೋಪಿಯನ್ನು ಬಂಧಿಸಲಾಗಿದೆ.
ಆಲತ್ತೂರು ಗ್ರಾಮದ ಕೃಷ್ಣ (45) ಆರೋಪಿ ಎಂದು ಗುರುತಿಸಲಾಗಿದೆ.
ಮಾರ್ಚ್ 8ರಂದು ನಡೆದ ಈ ವಿಚಾರ ಮಾಧ್ಯಮಗಳಲ್ಲಿ ಸುದ್ದಿಯಾಗಿ ಚರ್ಚೆಗೆ ಗುರಿಯಾಗಿತ್ತು. ಪ್ರಕರಣ ನಡೆದು ಹಲವು ದಿನಗಳಾದರೂ ಅರಣ್ಯ ಇಲಾಖೆಯು ಯಾವುದೇ ಕ್ರಮ ಕೈಗೊಳ್ಳದೆ ಇರಲು ಚುನಾವಣಾ ಆಲೋಚನೆಗಳಾಗಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾರ್ಚ್ 10ರಂದು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಖಡಕ್ ವಾರ್ನಿಂಗ್ ನೀಡಿದ್ದರು.
ಘಟನೆ ನಡೆದು 17 ದಿನಗಳ ನಂತರ ಎಚ್ಚೆತ್ತ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ.



