ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಬಂಧಿತ ಯುವಕನನ್ನು 23 ವರ್ಷದ ಸುರೇಶ್ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಬಾಲಕಿ ಕೂಗಾಡಿದ್ದು, ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಯುವಕನನ್ನು ಹಿಡಿದು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಘಟನೆ ಕುರಿತು ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



