HomeKarnataka NewsMysuru Dasara: ದಸರಾ ವೈಭವ ಹೆಚ್ಚಿಸಿದ ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ!

Mysuru Dasara: ದಸರಾ ವೈಭವ ಹೆಚ್ಚಿಸಿದ ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ!

For Dai;y Updates Join Our whatsapp Group

Spread the love

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಕಲೆ, ಸಂಸ್ಕೃತಿ, ಜಂಬೂಸವಾರಿ, ಅಂಬಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ಉತ್ಸುಕರಾಗಿದ್ದಾರೆ. ಇದೀಗ ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆಯೊಂದಿಗೆ ಆರಂಭವಾಗಿದೆ. ಒಟ್ಟು 58 ಸ್ತಬ್ಧಚಿತ್ರಗಳು ಈ ಬಾರಿಯ ದಸರಾ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿವೆ.

ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಸ್ತಬ್ಧಚಿತ್ರಗಳನ್ನು ವಿನ್ಯಾಸಗೊಳಿಸಲಾಗಿದೆ.ಈ ವರ್ಷದ ಮೆರವಣಿಗೆಯಲ್ಲಿ ಶಕ್ತಿ ಯೋಜನೆಯ ಸ್ತಬ್ಧಚಿತ್ರವು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತಂದಿರುವ ಈ ಯೋಜನೆಯ ಯಶಸ್ಸನ್ನು ಸ್ತಬ್ಧಚಿತ್ರವು ಪರಿಣಾಮಕಾರಿಯಾಗಿ ಪ್ರದರ್ಶಿಸುತ್ತಿದೆ.

ಯೋಜನೆ ಜಾರಿಯಾದ ನಂತರ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಾಗೂ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸರ್ಕಾರದ ಉದ್ದೇಶ ಸಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ತಮ್ಮ ಸಾಧನೆಯನ್ನು ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ಸರ್ಕಾರ ಈ ಸ್ತಬ್ಧಚಿತ್ರದ ಮೂಲಕ ಮಾಡುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!