ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಕೌಂಟ್ ಡೌನ್ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
Advertisement
ಕೋಟೆಯ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಲ್ಲಿ ನಂದಿ ಧ್ವಜ ಪೂಜೆಯೊಂದಿಗೆ ಜಂಬೂ ಸವಾರಿ ಉತ್ಸವ ಆರಂಭವಾಯಿತು. ರೇಷ್ಮೆ ಪಂಚೆಯಲ್ಲಿ ಆಗಮಿಸಿದ ಸಿಎಂ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಂದಿ ಪೂಜೆ ನೆರವೇರಿಸಿ, ಜಂಬೂ ಸವಾರಿಗೆ ಚಾಲನೆ ನೀಡಿದರು.
ಈ ವೇಳೆ ಸಚಿವರಾದ ಪರಮೇಶ್ವರ್, ಮಹದೇವಪ್ಪ, ಭೈರತಿ ಸುರೇಶ್, ವೆಂಕಟೇಶ್, ಶಿವರಾಜ್ ತಂಗಡಗಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.