ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಹೌದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಅಶ್ವರೋಹಿ ದಳ ಹಾಗೂ ಆನೆಗಳಿಗೆ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಮ್ಮುಖದಲ್ಲಿ ಸಿಡಿಮದ್ದು ತಾಲೀಮು ನಡೆಸಲಾಯಿತು.
Advertisement
ಈ ವೇಳೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಅಭಿಮನ್ಯು, ಭೀಮ, ಮಹೇಂದ್ರ, ಧನಂಜಯ, ಕಂಜನ್, ಏಕಲವ್ಯ, ಗೋಪಿ, ಸುಗ್ರೀವಾ, ಶ್ರೀಕಂಠ, ಪ್ರಶಾಂತ, ಕಾವೇರಿ, ಲಕ್ಷ್ಮಿ, ಹೇಮಾವತಿ ಹಾಗೂ ರೂಪ ಒಟ್ಟು 14 ಆನೆಗಳು ಹಾಗೂ ಅಶ್ವರೋಹಿ ದಳದ 30 ಕುದುರೆಗಳು ಭಾಗಿಯಾಗಿದ್ದವು.
ಸಿಡಿಮದ್ದು ತಾಲೀಮು ವೇಳೆ ಸಶಸ್ತ್ರ ಮೀಸಲು ಪಡೆ ಪೊಲೀಸರು 21 ಭಾರಿ ಕುಶಾಲತೋಪು ಸಿಡಿಸಿದರು. ಸಿಡಿಮದ್ದಿನ ಶಬ್ದಕ್ಕೆ ಕುದುರೆಗಳು ಚದುರಿದವು ಹಾಗೂ ಶ್ರೀಕಂಠ, ಹೇಮಾವತಿ ಆನೆಗಳು ಸ್ವಲ್ಪ ವಿಚಲಿತಗೊಂಡವು.