ನಾಗಮಂಗಲ ಗಲಭೆ: ಯಾವುದೇ ಜಾತಿ, ಧರ್ಮದವರಾಗಿರಲಿ ಬಿಡಲ್ಲ; ನಿರ್ದಾಕ್ಷಿಣ್ಯ ಕ್ರಮ – ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ, ಗಲಭೆ ಇದೀಗ ರಾಜ್ಯ ಮಟ್ಟದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ, ಗಲಭೆ ಕುರಿತ ಒಂದೊಂದೇ ಮಾಹಿತಿ ಹೊರಬೀಳುತ್ತಿವೆ. ಇನ್ನೂ ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯನ್ನು ಖಂಡಿಸಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜತೆಗೆ ನಾಗಮಂಗಲ ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

Advertisement

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here