ನಾಗಮಂಗಲ ಕಲ್ಲು ತೂರಾಟ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು!

0
Spread the love

ಮಂಡ್ಯ:- ನಾಗಮಂಗಲ ‌ಕೋಮುಗಲಭೆ ಕೇಸ್‌ ಗೆ ಸಂಬಂಧಿಸಿದಂತೆ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

Advertisement

ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ‌ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್‌ ಆರೋಪಿಗಳಿಗೆ ಷರತ್ತು ವಿಧಿಸಿದೆ.

ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.


Spread the love

LEAVE A REPLY

Please enter your comment!
Please enter your name here