ವಾಲ್ಮೀಕಿ ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ: ಕೋರ್ಟ್ ಗೆ ಆರೋಪಪಟ್ಟಿ ಸಲ್ಲಿಸಿದ ED!

0
Spread the love

ಬೆಂಗಳೂರು:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.

Advertisement

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಇಂದು ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್‌ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತು. ಸುಮಾರು 89.62 ಕೋಟಿ ರೂ.ಗಳನ್ನು ನಿಗಮದ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆಯಲಾದ ನಕಲಿ ಖಾತೆಗಳಿಗೆ ವರ್ಗಾಯಿಸಿ ನಂತರ ಆ ಹಣವವನ್ನು ಶೆಲ್‌ ಕಂಪನಿಗಳಿಗೆ ಮೂಲಕ ಅಕ್ರಮ ಎಸಗಲಾಗಿದೆ.

ಬಿ.ನಾಗೇಂದ್ರ ಅವರು ತಮ್ಮ ಪ್ರಭಾವ ಬಳಸಿ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ ಬೆಂಗಳೂರಿನಎಂಜಿ ರಸ್ತೆ ಶಾಖೆಗೆ ವರ್ಗಾಯಿಸಿದ್ದಾರೆ. 187 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಯಡಿ ರಾಜ್ಯ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೇ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ.

ತನಿಖೆಯ ವೇಳೆ 20.19 ಕೋಟಿ ರೂ. ಹಣವನ್ನು ಬಳ್ಳಾರಿ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಯ ಪ್ರಚಾರಕ್ಕೆ ದುರ್ಬಳಕೆ ಬಳಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಗೇಂದ್ರ ಅವರ ವೈಯಕ್ತಿಕ ಖರ್ಚಿಗೆ ಬಳಸಲಾಗಿದೆ.

ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here