ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವಿರೋಧವಾಗಿ ಆಯ್ಕೆ!

0
Spread the love

ತಮಿಳುನಾಡು: ತಮಿಳುನಾಡು ಬಿಜೆಪಿ ನೂತನ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆ ನಡೆದಿದ್ದು, ನೈನಾರ್ ನಾಗೇಂದ್ರನ್ ಮಾತ್ರ ಇಲ್ಲಿಯವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.  ಅವರ ನಾಮನಿರ್ದೇಶನವು ಪಕ್ಷದ ಹಾಲಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸಚಿವ ಎಲ್.ಮುರುಗನ್,

ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಮತ್ತು ಬಿಜೆಪಿ ಶಾಸಕಿ ಮತ್ತು ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಸೇರಿದಂತೆ ಪ್ರಮುಖ ನಾಯಕರಿಂದ ಅನುಮೋದನೆ ಪಡೆದಿದೆ ಎಂದು ಪಕ್ಷ ದೃಢಪಡಿಸಿದೆ. ನಾಗೇಂದ್ರನ್ ಅವರು ಅಣ್ಣಾಮಲೈ ಅವರ ಉತ್ತರಾಧಿಕಾರಿಯಾಗಿ ನೂತನ ರಾಜ್ಯಾಧ್ಯಕ್ಷರಾಗಲು ಸಜ್ಜಾಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here