ಬೆಂಗಳೂರು: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾದ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ಯಾಂಕರ್ ಕೆಎಂಎಫ್ ಹಾಲು ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ಸಂಜಯನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

