HomeKarnataka Newsಕಮಲ್ ಹಾಸನ್ ಸಿನಿಮಾ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚೋದು ಗ್ಯಾರಂಟಿ: ನಾರಾಯಣಗೌಡ!

ಕಮಲ್ ಹಾಸನ್ ಸಿನಿಮಾ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚೋದು ಗ್ಯಾರಂಟಿ: ನಾರಾಯಣಗೌಡ!

For Dai;y Updates Join Our whatsapp Group

Spread the love

ಬೆಂಗಳೂರು:- ಒಂದು ವೇಳೆ ಕಮಲ್ ಹಾಸನ್ ಸಿನಿಮಾ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚೋದು ಗ್ಯಾರಂಟಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದರು.

ದಕ್ಷಿಣ ಕನ್ನಡದಲ್ಲಿ ಮಳೆ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಿದರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚುತ್ತೇವೆ. ಆಗಾಗ ಕನ್ನಡಿಗರ ವಿಚಾರದಲ್ಲಿ ಮಾತು ಜಾಸ್ತಿ ಆಗಿದೆ. ಹೊರಗಿಂದ ಬಂದವರು ಕರ್ನಾಟಕ, ಕನ್ನಡದವರ ವಿರುದ್ಧ ಮಾತು ಆಡುತ್ತಿದ್ದಾರೆ. ತಮಿಳುನಾಡು ಆಗಾಗ ಕಾವೇರಿ ವಿಚಾರದಲ್ಲಿ ಸಂಘರ್ಷ ನಡೆಸುತ್ತಿತ್ತು. ಸಂಘರ್ಷಕ್ಕೆ ನಾಂದಿ ಹಾಡುವ ನಿಟ್ಟಿನಲ್ಲಿ ದ್ರಾವಿಡ ರಾಜ್ಯದ ಪ್ರಮುಖ ಸಾಹಿತ್ಯ ಜೊತೆ ಮಾತನಾಡಿದ್ದೆ. ಆದರೆ ಇದೇ ಸಂದರ್ಭದಲ್ಲಿ ಕಮಲ್ ಹಾಸನ್ ಈ ರೀತಿ ಹೇಳಿದ್ದಾರೆ. ನಟನ ಬಗ್ಗೆ ಅಭಿಮಾನ ಇತ್ತು. ಆದರೆ ಮೊನ್ನೆ ಆಡಿದ ಮಾತು ಕನ್ನಡಿಗರನ್ನ ಕೆರಳಿಸುವ, ಕನ್ನಡಿಗರನ್ನ ಒಗ್ಗೂಡಿಸುವ, ಪ್ರತಿಭಟಿಸುವ ಸಂದರ್ಭಕ್ಕೆ ಬಂದಿದ್ದಾರೆ. ಯಾವ ಆಧಾರದಲ್ಲಿ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಏಕಾಏಕಿ ತಮಿಳುಗರನ್ನ ಓಲೈಸುವ ನಿಟ್ಟಿನಲ್ಲಿ ದುರಹಂಕಾರ, ದುರಾಭಿಮಾನದ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಮಿಳಿನ ಬಗ್ಗೆ ಅವರು ಏನು ಬೇಕಾದರೂ ಹೇಳಲಿ. ಇನ್ನೊಂದು ಭಾಷೆ ಬಗ್ಗೆ ಮಾತನಾಡುವಾಗ ಕನಿಷ್ಠ ಅರಿವು ಇರಬೇಕಿತ್ತು. ಅದೇ ಸಂದರ್ಭದಲ್ಲಿ ಕನ್ನಡಿಗರನ್ನ ಒಗ್ಗೂಡಿಸುವ ನಿಟ್ಟಿನಲ್ಲಿ ಹೋರಾಟ ಮಾಡಿದವರ ಸುಪುತ್ರ ಶಿವರಾಜ್ ಕುಮಾರ್ ಇದ್ದರು. ಅವರು ಅಲ್ಲಿಯೇ ಹೇಳಬಹುದಾಗಿತ್ತು. ಕನ್ನಡಕ್ಕೆ ತನ್ನದೇ ಸ್ವಂತಿಕೆ ಇದೆ ಅಂತ ಹೇಳಬಹುದಾಗಿತ್ತು. ವಿಶ್ವದ ಲಿಪಿ ರಾಣಿ ಅಂತ ಕರೆದಿರೋದು ಕನ್ನಡ ಅಂತ ಹೇಳಬಹುದಾಗಿತ್ತು. ಆ ಸಂದರ್ಭದಲ್ಲಿ ಅವರಿಗೆ ಮಾಹಿತಿ ಇಲ್ಲದೆ ಇದ್ದಿರಬಹುದು. ಆದರೆ ಇವತ್ತಿಗೂ ಶಿವರಾಜ್ ಕುಮಾರ್ ಕಮಲ್ ಹಾಸನ್‌ರನ್ನ ವಹಿಸಿಕೊಳ್ಳುತ್ತಿರೋದನ್ನ ಸಹಿಕೊಳ್ಳೋಕೆ ಆಗಲ್ಲ. ಶಿವರಾಜ್ ಕುಮಾರ್ ಆಗಿದ್ದರೆ ದೊಡ್ಡ ವಿಷಯ ಯಾವುದು? ಏಳೂವರೆ ಕೋಟಿ ಕನ್ನಡಿಗರ ಭಾವನೆ ದೊಡ್ಡದು ಅನ್ನಿಸಲಿಲ್ಲವಾ? ಅಥವಾ ಇದನ್ನ ನೇರವಾಗಿ ಹೇಳುವ ಧೈರ್ಯ ಇಲ್ಲವಾ ಎಂದು ಶಿವರಾಜ್‌ಕುಮಾರ್ ನಡೆಗೂ ಅಸಮಾಧಾನ ವ್ಯಕ್ತಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!