ವಿಜಯಸಾಕ್ಷಿ ಸುದ್ದಿ, ಗದಗ: ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳ ವೇತನ ಬಾಕಿಯಿದ್ದು, ಇದನ್ನು ತಕ್ಷಣವೇ ಪಾವತಿಸಬೇಕು ಮತ್ತು ಸೇವಾ ಭದ್ರತೆ ಒದಗಿಸಬೇಕೆಂದು ನರೇಗಾ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಬಾಳಿಕಾಯಿ ಅವರು ಲಕ್ಕುಂಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಮ್ಮದೇ ಸರ್ಕಾರ ಜಾರಿಗೆ ತಂದಿರುವ ನರೇಗಾ ಯೋಜನೆಯ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಒದಗಿಸಿ, ಬಾಕಿ ವೇತನವನ್ನು ಶೀಘ್ರವಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು. ಮನವಿ ಪತ್ರವನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯವನ್ನು ಪರಿಶೀಲಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನರೇಗಾ ನೌಕರ ಸಂಘದ ಗೌರವಾಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ್ ಸೇರಿದಂತೆ ಪದಾಧಿಕಾರಿಗಳಿದ್ದರು.



