ಉಡುಪಿ:- ಕೃಷ್ಣನಗರಿ ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.
ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಮೋದಿ ಅವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಉಡುಪಿಯತ್ತ ಪ್ರಯಾಣ ಬೆಳೆಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಹೆಲಿಪ್ಯಾಡ್ಗೆ ಆಗಮಿಸಿದರು. ಅಲ್ಲಿಂದ ಸುಮಾರು 1.8 ಕಿಲೋ ಮೀಟರ್ ದೂರದ ವರೆಗೆ ರೋಡ್ ಶೋ ನಡೆಸಿದರು. ಈ ವೇಳೆ ಮೋದಿಯನ್ನ ನೋಡಲು ರಸ್ತೆ ಬದಿಯಲ್ಲಿ ಜನರು ಕಿಕ್ಕಿರಿದು ನಿಂತಿದ್ದರು. ಬಳಿಕ ನೇರವಾಗಿ ಕೃಷ್ಣಮಠಕ್ಕೆ ತೆರಳಿದ್ದಾರೆ.
ಅಲ್ಲಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತೀರ್ಥಮಂಟಪ ಅನಾವರಣದಲ್ಲಿ ಪಿಎಂ ಮೋದಿ ಭಾಗಿಯಾಗಲಿದ್ದು, ಲಕ್ಷಕಂಠ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.



