ವಿಜಯಸಾಕ್ಷಿ ಸುದ್ದಿ, ಗದಗ : ದೇಶದ ಮಹಿಳೆಯರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಕ್ರಮಗಳು ಶ್ಲಾಘನೀಯ ಎಂದು ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಹಿಳೆಯರ ಘನತೆಯನ್ನು ಕಾಪಾಡಲು ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಾಣ, ಮಹಿಳೆಯರನ್ನು ಹೊಗೆ ಮುಕ್ತರನ್ನಾಗಿಸಲು ಉಜ್ವಲ ಯೋಜನೆಯಡಿ ದೇಶದ ಪ್ರತಿ ಮನೆಗೂ ಎಲ್ಪಿಜಿ ಸಂಪರ್ಕ, ಮಹಿಳೆಯರು ಹಣ ಉಳಿತಾಯಕ್ಕೆ ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆ ತೆರೆಯಲು ಅವಕಾಶ, ದೂರದಿಂದ ನೀರು ತರುವುದನ್ನು ತಪ್ಪಿಸಲು ಜಲ್ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ನೀರು, ಮಹಿಳೆಯರ ಆರೋಗ್ಯ ಶುಚಿತ್ವ ಕಾಪಾಡುವ ಸಲುವಾಗಿ ಸ್ಯಾನಿಟರಿ ಪ್ಯಾಡ್ಗಳ ವಿತರಣೆ ಮತ್ತು ಅದರ ಬಗ್ಗೆ ತಿಳುವಳಿಕೆ, ರಾಜಕೀಯದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿಸಲು ಶೇ.33ರಷ್ಟು ಮೀಸಲಾತಿ ಹೆಚ್ಚಿಸಿ ಮಹಿಳಾ ಸಶಕ್ತೀಕರಣಕ್ಕೆ ಒತ್ತು, ತ್ರಿವಳಿ ತಲಾಕ್ ನಿಷೇಧಿಸುವ ಮೂಲಕ ಮುಸ್ಲಿಂ ಮಹಿಳೆಯರ ಹಕ್ಕು-ಗೌರವ ಮತ್ತು ಘನತೆಯನ್ನು ಎತ್ತಿಹಿಡಿದಿರುವದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.



