ವಿಜಯಸಾಕ್ಷಿ ಸುದ್ದಿ, ಗದಗ : ಮಾನವ ಸ್ವಚ್ಛತೆಯ ಬದುಕಿನತ್ತ ನಡೆಯಬೇಕು. ತನ್ನ ಸುತ್ತಲಿನ ಜನರಿಗೆ ಹೊಸದಾಗಿ ಸೃಷ್ಟಿಯಾಗುವ ರೋಗಗಳ ಬಗ್ಗೆ ಜಾಗೃತಿ ಮೂಡಿಸಿಕೊಂಡು ಆರೋಗ್ಯದ ಕಾಳಜಿ ಹೊಂದಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ ಪಾಟೀಲ ನುಡಿದರು.
ಅವರು ಸನ್ಮಾರ್ಗ ಕಾಲೇಜು ಗದಗ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ `ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ. ಚೇತನ್ ಎಚ್.ಎಚ್ ಮಾತನಾಡಿ, ಜಂತು ಹುಳು ಮಾನವನನ್ನು ರಕ್ತಹೀನನ್ನಾಗಿಸುವದಲ್ಲದೇ ಮಾನವನ ದೇಹದ ಮೇಲೆ ಅನೇಕ ರೀತಿಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವುದೆಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಮಾತನಾಡಿ, ಜಂತುಹುಳು ರೋಗದ ಬಗ್ಗೆ ವಿದ್ಯಾರ್ಥಿಗಳು ಜಾಗೃತರಾಗಬೇಕು. ಅದು ಬರದಂತೆ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕೆಂದರು.
ವೇದಿಕೆಯ ಮೇಲೆ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ಆರೋಗ್ಯ ಇಲಾಖೆಯ ಡಾ. ಮಹೇಶ ಕೊಪ್ಪಳ, ಗೀತಾ ಎನ್.ಕಾಂಬಳೆ, ಶ್ರೀಮತಿ ಉಮಚಗಿ, ಪ್ರವೀಣ ಮಾನ್ವಿ, ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರೊ. ಎಚ್.ಎಸ್. ದಳವಾಯಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗದಗ ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಎನ್.ಕಾಂಬಳೆ ವಂದಿಸಿದರು.
ಜಂತುಹುಳು ನಿವಾರಣಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.