ವೈದ್ಯ ವೃತ್ತಿ ಪವಿತ್ರವಾದದ್ದು : ಡಾ. ಜಗದೀಶ ಶಿರೋಳ

0
'National Doctor's Day' at Gadag-Betageri Rotary Club
Spread the love

ವಿಜಯಸಾಕ್ಷಿ ಸುದ್ದಿ, ಗದಗ : ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು, ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸುವ ಮೂಲಕ ಸಂತೃಪ್ತಿ ಕಾಣಬಹುದಾಗಿದೆ ಎಂದು ಗದುಗಿನ ಹಿರಿಯ ವೈದ್ಯ ಡಾ. ಜಗದೀಶ ಶಿರೋಳ ಅಭಿಪ್ರಾಯಪಟ್ಟರು.
ಅವರು ಸೋಮವಾರ ರೋಟರಿ ಐಕೇರ್ ಸೆಂಟರ್‌ನಲ್ಲಿ ರೋಟರಿ ಕ್ಲಬ್ ಗದಗ-ಬೆಟಗೇರಿ, ಇನ್ನರ್‌ವ್ಹೀಲ್ ಕ್ಲಬ್ ಗದಗ-ಬೆಟಗೇರಿ, ವಿಜಯ ಕಾಲೇಜ್ ಆಫ್ ಫೈನ್ ಆರ್ಟ್ಸ್ ಗದಗ ಹಾಗೂ ಬಸವೇಶ್ವರ ಬ್ಲಡ್ ಸೆಂಟರ್ ಗದಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗದಗ-ಬೆಟಗೇರಿ ರೋಟರಿ ಕ್ಲಬ್ ಉತ್ತಮ ರೀತಿಯಲ್ಲಿ ಸಮಾಜಮುಖಿಯಾಗಿ ಕಾರ್ಯ ಮಾಡುತ್ತಿದೆ. ಬರಲಿರುವ ದಿನಗಳಲ್ಲಿ ಕ್ಲಬ್‌ನ ನೂತನ ಪದಾಧಿಕಾರಿಗಳು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒಳ್ಳೆಯ ಕೆಲಸ ಕಾರ್ಯ ಯೋಜನೆಗಳನ್ನು ಮಾಡಲಿ. ರಕ್ತದಾನ, ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಜೊತೆಗೆ ಉಚಿತ ನೇತ್ರ ಚಿಕಿತ್ಸೆ ಶಿಬಿರವನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವದು ಶ್ಲಾಘನೀಯ ಎಂದರು.
ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಆರ್.ಬಿ. ಉಪ್ಪಿನ ಸ್ವಾಗತಿಸಿ ಅಧ್ಯಕ್ಷತೆ ವಹಿಸಿ ಸಂದರ್ಭೋಚಿತವಾಗಿ ಮತನಾಡಿದರು.  ವೇದಿಕೆಯ ಮೇಲೆ ರೋಟರಿ ಕ್ಲಬ್‌ನ ಅಸಿಸ್ಟಂಟ್ ಗರ‍್ನರ್ ಶಿವಾಚಾರ್ಯ ಹೊಸಳ್ಳಿಮಠ, ರೋಟರಿ ಕ್ಲಬ್ ಗದಗ-ಬೆಟಗೇರಿ ವೇಲ್ಪೇರ್ ಸೊಸೈಟಿಯ ಅಧ್ಯಕ್ಷ ಶ್ರೀಧರ ಸುಲ್ತಾನಪೂರ, ಗದಗ-ಬೆಟಗೇರಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂತೋಷ ಅಕ್ಕಿ, ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ನಾಗರತ್ನ ಮಾರನಬಸರಿ, ವಿಜಯ ಕಾಲೇಜ್ ಆಫ್ ಫೈನ್ ಆರ್ಟ್ಸ್ನ ಪ್ರಾಚಾರ್ಯ ಸಿ.ವ್ಹಿ. ಬಡಿಗೇರ ಉಪಸ್ಥಿತರಿದ್ದರು.
ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಗದುಗಿನ ಹಿರಿಯ ವೈದ್ಯ ಡಾ.ಜಗದೀಶ ಶಿರೋಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಹಿರಿಯ ವೈದ್ಯರಾದ ಡಾ. ರಾಜಶೇಖರ ಬಳ್ಳಾರಿ, ಡಾ. ಶೇಖರ ಸಜ್ಜನರ, ಡಾ. ಪ್ರದೀಪ ಉಗಲಾಟ, ಎಚ್.ಎಸ್. ಪಾಟೀಲ, ವಿಶ್ವನಾಥ ಯಳಮಲಿ, ಶ್ರೀಧರ ಧರ್ಮಾಯತ, ಬಾಲಕೃಷ್ಣ ಕಾಮತ, ವೀಣಾ ತಿರ್ಲಾಪೂರ, ಚನ್ನವೀರ ಹುಣಶೀಕಟ್ಟಿ, ಸುರೇಶ ಕುಂಬಾರ, ಸುವರ್ಣ ವಸ್ತçದ, ಪುಷ್ಪಾ ಭಂಡಾರಿ, ಹೇಮಾ ಪುಂಗಾಲಿಯಾ, ಅಶ್ವಿನಿ ಜಗತಾಪ, ನೀಲಾಂಬಿಕಾ ಉಗಲಾಟ, ಜ್ಯೋತಿ ಭರಮಗೌಡರ ಸೇರಿದಂತೆ ಕ್ಲಬ್ ಸದಸ್ಯರು, ಕಾಲೇಜು ವಿದ್ಯಾರ್ಥಿಗಳಿದ್ದರು.
ಡಾ. ಬಿ.ಸಿ. ರಾಯ್ ಅವರು ವೈದ್ಯಕೀಯ ಲೋಕಕ್ಕೆ ಸಲ್ಲಿಸಿದ ಅನುಪಮ ಸೇವೆ ಹಾಗೂ ಅವರ ಜನ್ಮದಿನಾಚರಣೆಯ ಸ್ಮರಣೆಯಲ್ಲಿ ಪ್ರತಿ ವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ. ಡಾ.ರಾವ್ ಜನಿಸಿದ್ದು ಮತ್ತು ನಿಧನರಾದದ್ದು ಜುಲೈ 1 ಎಂಬುದು ವಿಶೇಷ. ವೈದ್ಯಕೀಯ ಕ್ಷೇತ್ರದಲ್ಲಿ ಇಂದು ಸಾಕಷ್ಟು ಪ್ರಗತಿ ಆಗಿದ್ದು, ಜನಸಮುದಾಯದ ಆರೋಗ್ಯ ಕಾಯ್ದುಕೊಳ್ಳಲು ವೈದ್ಯರು ಬದ್ಧತೆಯಿಂದ ಹಗಲಿರುಳು ಕಾರ್ಯ ಮಾಡುತ್ತಿದ್ದಾರೆ ಎಂದು ಡಾ. ಜಗದೀಶ ಶಿರೋಳ ಹೇಳಿದರು.

Spread the love
Advertisement

LEAVE A REPLY

Please enter your comment!
Please enter your name here