ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ಹುಲಕೋಟಿ ಗ್ರಾಮದ ಕೆ.ಎಚ್. ಪಾಟೀಲ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನಾ ಮಂಡಳಿ ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಗದಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಎಸ್.ಎ. ಖಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹುಲಕೋಟಿ ಗ್ರಾ. ಪಂ ಅಧ್ಯಕ್ಷರಾದ ನಾಗರತ್ನ ಬಳಿಹಾಳಮಠ, ಬಾಲಕಿಯರ ಪ್ರೌಢಶಾಲೆ ಹುಲಕೋಟಿಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಧಾ ಹಿರೇಮಠ, ಮಂಜುನಾಥ್ ಎಸ್. ತೋಟದ, ಪಿ.ಕೆ ಅವರಡ್ಡಿ, ಎಸ್.ಡಿ.ಎಂ.ಸಿ, ಸದಸ್ಯರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ-2025ರ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿತ್ತು.

ಎಸ್.ಎಸ್. ಪರ್ವತಿ ಪ್ರಾರ್ಥಿಸಿದರು. ಸಿ.ವ್ಹಿ. ಅಂಬಿಗೇರ ಸ್ವಾಗತಿಸಿದರು. ಪಿ.ಪಿ. ಟಕಾರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here