ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯ : ಸಂಗಮೇಶ್ ಬಬಲೇಶ್ವರ

0
National Sports Day programme
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಕ್ರೀಡಾಸಕ್ತಿ ಇರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ಹೇಳಿದರು.

Advertisement

ಅವರು ಗುರುವಾರ ಬೆಳಿಗ್ಗೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಮಕ್ಕಳಲ್ಲಿ ಒಬ್ಬ ಮೇಜರ್ ಧ್ಯಾನ್‌ಚಂದ್ ಅವರು ಹುಟ್ಟಿ ಬರಲಿ ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ. ಮಕ್ಕಳಲ್ಲಿಯ ಕ್ರೀಡಾಸಕ್ತಿ ಗುರುತಿಸಿ ನೀರೆರೆದು ಬೆಳೆಸಿದರೆ ಅದ್ಭುತ ಫಲಿತಾಂಶವನ್ನ ಕ್ರೀಡಾ ಜಗತ್ತಿನಲ್ಲಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕಿರ್ ಸನದಿ ಮಾತನಾಡಿ, ಕ್ರೀಡೆಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕ್ರೀಡಾ ಚಟುವಟಿಕೆಗಳಿಗೆ ಬೇಕಾದ ನಿವೇಶನವನ್ನು ಒದಗಿಸಲು ಪ್ರಯತ್ನಿಸುತ್ತೇನೆ. ಕ್ರೀಡಾಪಟುಗಳಿಗೆ ಅಗತ್ಯ ನೆರವು ಕಲ್ಪಿಸುವ ಎಲ್ಲ ಪ್ರಯತ್ನಗಳನ್ನು ಮಾಡೋಣ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾವಿಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆಯ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here