ವಿದ್ಯಾರ್ಥಿ ಶಕ್ತಿಯೇ ರಾಷ್ಟ್ರದ ಶಕ್ತಿ : ವಿರೇಂದ್ರ ಪಾಟೀಲ

0
'National Students' Day' and 'Foundation Day of ABVP' ceremony
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಲ್ಲ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಮುಖ್ಯ ಗುರಿಯಾಗಿದೆ ಎಂದು ರಾಷ್ಟ್ರೋತ್ಥಾನ ಪರಿಷತ್‌ನ ಕಾರ್ಯಕರ್ತ ವಿರೇಂದ್ರ ಪಾಟೀಲ ಹೇಳಿದರು.
ಅವರು ಮಂಗಳವಾರ ಗದುಗಿನ ಸನ್ಮಾರ್ಗ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ‘ರಾಷ್ಟ್ರೀಯ ವಿದ್ಯಾರ್ಥಿಗಳ ದಿನ’ ಹಾಗೂ ‘ಎಬಿವಿಪಿಯ ಸಂಸ್ಥಾಪನಾ ದಿನಾಚರಣೆಯ’ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಎಬಿವಿಪಿ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೂ ಕೈಗೊಂಡ ಹೋರಾಟದ ಕಾರ್ಯಕ್ರಮಗಳನ್ನು, ಗೈದ ಸಾಧನೆಗಳನ್ನು ಎಳೆ ಎಳೆಯಾಗಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿವರಿಸಿದ ಅವರು, ವಿದ್ಯಾರ್ಥಿ ಶಕ್ತಿಯೇ ರಾಷ್ಟçದ ನಿಜ ಶಕ್ತಿ. ಆದ್ದರಿಂದ ಇಂದಿನ ವಿದ್ಯಾರ್ಥಿಗಳಾದ ನೀವು ಯಾವ ದುಶ್ಚಟಗಳಿಗೆ ಬಲಿಯಾಗದೇ, ಶಿಸ್ತಿನಿಂದ ಶಿಕ್ಷಣ ಪಡೆದರೆ ರಾಷ್ಟ್ರೀಯ ಶಕ್ತಿ ತನ್ನಿಂದ ತಾನೇ ಅಭಿವೃದ್ಧಿ ಹೊಂದುತ್ತಾ ಹೊಗುತ್ತದೆ ಎಂದರು.
ಎಬಿವಿಪಿಯ ಇನ್ನೊರ್ವ ಕಾರ್ಯಕರ್ತ ರವಿ ನರೇಗಲ್ ಮಾತನಾಡಿ, ಎಬಿವಿಪಿಯ ಕಾರ್ಯ ರೂಪು ರೇಷಗಳನ್ನು, ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರಲ್ಲದೇ, ಎಬಿವಿಪಿಯ ಸಕ್ರಿಯ ಕಾರ್ಯಕರ್ತರಾಗಲು ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಸದಸ್ಯರಾಗಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಸ್ಪೂರ್ತಿ ಹಾಗೂ ಶ್ರೇಯಾ ಪ್ರಾರ್ಥಿಸಿದರು. ಎಬಿವಿಪಿ ಕಾರ್ಯಕರ್ತರು ಸ್ವಾಗತಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ,ನಿರ್ದೇಶಕರಾದ ಪ್ರೊ. ರೋಹಿತ ಒಡೆಯರ್, ಪ್ರೊ.ರಾಹುಲ ಒಡೆಯರ್, ಪ್ರೊ.ಪುನೀತ ದೇಶಪಾಂಡೆ, ಪ್ರೊ.ಸೈಯ್ಯದ್ ಮತಿನ್ ಮುಲ್ಲಾ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದರು.
ಸಭೆಯ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಮಾತನಾಡಿ, ವಿದ್ಯಾರ್ಥಿಗಳು ವಿನಯದಿಂದ ವಿದ್ಯೆಯನ್ನು ಕಲಿತಾಗ ಮಾತ್ರ ರಾಷ್ಟç ಶಕ್ತಿಯ ನಿರ್ಮಾಣ ಸಾದ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಮೊದಲು ವಿನಯ ಸಂಪನ್ನತೆ, ಒಳ್ಳೆಯ ಸಂಸ್ಕಾರ ಮೂಡಿಬರಲಿ ಎಂದು ಆಶಿಸಿದರು.

Spread the love
Advertisement

LEAVE A REPLY

Please enter your comment!
Please enter your name here